ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಾಲ್ಮೀಕಿ ನಿಗಮದ ಹಗರಣಕ್ಕೆ ಮತ್ತೊಬ್ಬ ಸಚಿವರ ಹೆಸರು ತಳುಕು: ಸಿಬಿಐ ಹಸ್ತಾಂತರಕ್ಕೆ ಆಗ್ರಹ

11:40 AM Jun 08, 2024 IST | Samyukta Karnataka

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮಕ್ಕೆ ಸಚಿವ ನಾಗೇಂದ್ರ ಬೆನ್ನಲ್ಲೇ ಮತ್ತೊಬ್ಬ ಸಚಿವರ ಹೆಸರು ತಳುಕು ಹಾಕಿಕೊಂಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ರಾಜೀನಾಮೆ ನೀಡಬೇಕೆಂದು ಸಾಮಾಜಿ ಜಾಲತಾಣದಲ್ಲಿ ಕರ್ನಾಟಕ ಬಿಜೆಪಿ ಆಗ್ರಹಿಸಿ ಪೋಸ್ಟ್‌ ಮಾಡಿದೆ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಸಿದ್ದೃಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್ ಭ್ರಷ್ಟಾಚಾರ.
ಈ ಪ್ರಕರಣದ 8 ನೇ ಆರೋಪಿ, ಎಸ್ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲವೆಂದು,

  1. ತನ್ನ ಮೊಬೈಲ್‌ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್ ದದ್ದಲ್ ಜೊತೆ ನಡೆಸಿರುವ ಸಂಭಾಷಣೆಯನ್ನು SIT ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ಕೋರ್ಟ್ ಪಡೆದುಕೊಳ್ಳಬೇಕು.
  2. ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ್ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರ್ಟಿನಲ್ಲಿ ಮನವಿ ಮಾಡಿರುತ್ತಾರೆ. ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದಿದ್ದಾರೆ.
Next Article