ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಸತ್ ಭವನದಲ್ಲಿ ನಡೆದ ಕೃತ್ಯ ಆಘಾತಕಾರಿ

10:08 PM Dec 14, 2023 IST | Samyukta Karnataka

ಧಾರವಾಡ: ಸಂಸತ್ ಭವನದಲ್ಲಿ ನಡೆದ ಗಲಾಟೆ ಹಾಗೂ ಭಯೋತ್ಪಾದಕ ರೀತಿಯ ಕೃತ್ಯ ಆಘಾತಕಾರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಕಾನೂನು ಬಾಹಿರವಾಗಿ ಈ ರೀತಿಯ ಭಯೋತ್ಪಾದಕ ಕೃತ್ಯ ಖಂಡನೀಯ ಎಂದು ತಿಳಿಸಿದರು.
ಸಂಸತ್ ಭವನದಲ್ಲಿನ ಗಲಾಟೆಯ ವಿಷಯವನ್ನು ಯಾರು ಒಪ್ಪುವುದಿಲ್ಲ. ಇದರ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು. ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಹೀಗೆ ಮಾಡಿಸಿರಬಹುದು. ಸಂಸದ ಪ್ರತಾಪ್ ಸಿಂಹ ಅವರನ್ನು ಟಾರ್ಗೆಟ್ ಮಾಡಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದರು.
ಖಲಿಸ್ತಾನದ ಲೀಡರ್ ೨೨ ವರ್ಷದ ಹಿಂದಿನಂತೆ ಮಾಡುತ್ತೇವೆ ಎಂದು ಮುಂಚಿತವಾಗಿ ಹೇಳಿದ್ದು ಬುಧವಾರ ನಡೆದ ಘಟನೆಗೆ ಲಿಂಕ್ ಆಗುತ್ತಿದೆ. ಇದು ನಮ್ಮ ದೇಶಕ್ಕೆ ಅಪಾಯಕಾರಿ. ಖಲಿಸ್ತಾನ ಹಿನ್ನಲೆ ಬಗ್ಗೆಯೂ ಪರಿಶೀಲನೆ ಮಾಡಬೇಕು. ಈ ಆರು ಜನ ಆರೋಪಿಗಳನ್ನು ಎನ್‌ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.

Next Article