ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು
ಪ್ರಸಕ್ತ ಸಾಲಿನಿಂದ ಎಲ್ಲ ಇಲಾಖೆಯಗಳ ನೇಮಕಾತಿಯಲ್ಲಿ ಶೇ.೨ರಷ್ಟು ಹುದ್ದೆಗಳನ್ನು ಮೀಸಲಿಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಇಲ್ಲಿವರೆಗೆ ಪೊಲೀಸ್ ಮತ್ತು ಅರಣ್ಯ ಇಲಾಖೆ ನೇಮಕಾತಿಗಳಲ್ಲಿ ಮಾತ್ರ ಕ್ರೀಡಾಪುಟುಗಳಿಗೆ ಹುದ್ದೆ ಮೀಸಲಾಗಿತ್ತು. ಬೆಂಗಳೂರು ಉತ್ತರ ತಾಲೂಕಿನಲ್ಲಿ ೭೦ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯ ಒಳಗೊಂಡ ಕ್ರೀಡಾ ನಗರ ನಿರ್ಮಾಣ. ಬೆಂಗಳೂರಿನ ೪ ಸ್ಥಳಗಳಲ್ಲಿ ಬಹು ಕ್ರೀಡಾ ಸೌಲಭ್ಯಗಳನ್ನು ಒಳಗೊಂಡ ಕ್ರೀಡಾ ಸಂಕೀರ್ಣ ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಾಣ. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ೧೨ ಕೋಟಿ ರೂ. ಅನುದಾನ. ಮಿನಿ ಒಲಂಪಿಕ್ಸ್ ಆಯೋಜನೆ. ಪ್ಯಾರಿಸ್ ಒಲಂಪಿಕ್ನಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚು ಪದಕ ಪಡೆಯುವವರಗೆ ಪ್ರೋತ್ಸಾಹ ಧನ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ವೇಳೆ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ನೆರವು. ರಾಜ್ಯದ ೧೪ ಸ್ಥಳಗಳಲ್ಲಿ ಮುಂದಿನ ೨ ವರ್ಷದಲ್ಲಿ ೩೫ ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಾಣ.