ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸರ್ಕಾರ ಶಿಕ್ಷಣ ಆಲಕ್ಷಿಸಿದರೆ ದೇಶದ ಭವಿಷ್ಯ ಗಂಡಾಂತರಕ್ಕೆ

11:13 AM May 18, 2024 IST | Samyukta Karnataka

ಬೆಂಗಳೂರು: ಈ ನಾಡನ್ನು ಹಾಗೂ ದೇಶವನ್ನು ಭವಿಷ್ಯತ್ತಿನಲ್ಲಿ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿ ದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ.

ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಗ್ಗೆ ಅಸಹಾಯಕತೆಯಿಂದ ಕೋಪೋದ್ರಿಕ್ತರಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ 'ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು' ಅಂತದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಒದಗಿ ಬಂದಿದೆ. 'ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತದೆ'.

ಮಾನ್ಯ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ. ಈಗಲಾದರೂ ಈ ನಾಡನ್ನು ಹಾಗೂ ದೇಶವನ್ನು ಭವಿಷ್ಯತ್ತಿನಲ್ಲಿ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿ ದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.

Next Article