ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೆಲೆಬ್ರಿಟಿಗಳ ಜತೆ ದರ್ಶನ್ ಸಂಭ್ರಮಾಚರಣೆ

04:15 PM Dec 31, 2023 IST | Samyukta Karnataka

ಬೆಂಗಳೂರು: ಮೊನ್ನೆಯಷ್ಟೇ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದ ಸಂಭ್ರಮಾಚರಣೆಯನ್ನು ಸೆಲೆಬ್ರಿಟಿಗಳ ಜತೆ ಆಚರಿಸಲು ನಟ ದರ್ಶನ್ ಮುಂದಾಗಿದ್ದಾರೆ.
ಹೌದು. 2023ರ ಅಭೂತಪೂರ್ವ ಸಿನಿಮಾವಾಗಿ ಹೊರ ಹೊಮ್ಮಿದೆ. ಇದರ ಖುಷಿ ಹಂಚಿಕೊಳ್ಳಲು ಖುದ್ದು ದರ್ಶನ್ ಬೆಂಗಳೂರಿನ ಒರಾಯನ್ ಮಾಲ್‌ಗೆ ಸಂಜೆ 5ಗಂಟೆಗೆ ಭೇಟಿ ನೀಡಲಿದ್ದಾರೆ. ತನ್ನ ನೆಚ್ಚಿನ ಸೆಲೆಬ್ರಿಟಿಗಳ ಜತೆ ಯಶಸ್ಸನ್ನು ಸಂಭ್ರಮಿಸಿ, ಮಾತನಾಡಲಿದ್ದಾರೆ. ಇವರೊಟ್ಟಿಗೆ ಚಿತ್ರತಂಡವೂ ಸಾಥ್ ನೀಡಲಿದೆ.
ಯಶಸ್ಸಿನ ಖುಷಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ದರ್ಶನ್, "ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ❤️ ಈ ಪ್ರೀತಿಯ ಚಪ್ಪಾಳೆ ನಮ್ಮ #Kaatera ಚಿತ್ರತಂಡದ ಮನತುಂಬಿದೆ. Speechless 🙏" ಎಂದು ಬರೆದುಕೊಂಡಿದ್ದಾರೆ.

Next Article