ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

12:15 PM Apr 24, 2024 IST | Samyukta Karnataka

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ.
ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ ಈ ಕುರಿತಂತೆ ಪೋಸ್ಟ್‌ ಮಾಡಿದ್ದು ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ನಿಧನಕ್ಕೆ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ತಕ್ತಪಡಿಸಿದೆ. ತಾಯಿನಾಡು, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ಚೇತನ ಅರ್ಜುನ್ ದೇವ್ ಅವರಾಗಿದ್ದರು ಎಂದು KUWJ ಶೋಕಿಸಿದೆ. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನ ಸುದ್ದಿಮನೆಗೆ ತುಂಬಲಾರದ ನಷ್ಟ ಎಂದು KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.

Next Article