For the best experience, open
https://m.samyuktakarnataka.in
on your mobile browser.

40 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

11:31 AM Nov 11, 2023 IST | Samyukta Karnataka
40 ಸಾವಿರ ಕೋಟಿ ಹೂಡಿಕೆ  1 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ಜಾಗತಿಕ ಮಟ್ಟದ ಕೆಎಚ್ಐಆರ್ ಸಿಟಿ ನಿರ್ಮಾಣದಿಂದ 40 ಸಾವಿರ ಕೋಟಿ ರೂ. ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ರಾಜಧಾನಿಯಿಂದ 60-80 ಕಿ.ಮೀ. ದೂರದಲ್ಲಿ ಜಾಗತಿಕ ದರ್ಜೆಯ 'ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ' ವನ್ನು ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ ಆಗಲಿದ್ದು, 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ
✅ ಜಾಗತಿಕ ದರ್ಜೆಯ `ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ (#ಕೆಎಚ್ಐಆರ್ ಸಿಟಿ)ವನ್ನು ಅಭಿವೃದ್ಧಿ ಪಡಿಸಲಾಗುವುದು.
✅ 40 ಸಾವಿರ ಕೋಟಿ ರೂ. ಹೂಡಿಕೆಯಾಗಿ 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ.
✅ 2 ಸಾವಿರ ಎಕರೆ ವಿಸ್ತೀರ್ಣ, ಮೊದಲ ಹಂತದಲ್ಲಿ ಸಾವಿರ ಎಕರೆಯಲ್ಲಿ ಸಾಕಾರವಾಗಲಿದೆ.
✅ ಹಿಂದಿನಿಂದಲೂ ರಾಜ್ಯವು ಕೈಗಾರಿಕಾವಲಯದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುತ್ತಲೇ ಬಂದಿದೆ. #ಎಲೆಕ್ಟ್ರಾನಿಕ್_ಸಿಟಿ ನಿರ್ಮಾಣ, #ಐಟಿಪಿಎಲ್ ಗಳನ್ನು ಉಲ್ಲೇಖಿಸಬಹುದು.
✅ಉದ್ದೇಶಿತ #KHIRCity ರಾಜಧಾನಿಯಿಂದ 60-80 ಕಿ.ಮೀ. ದೂರದಲ್ಲಿಯೇ ನಿರ್ಮಾಣವಾಗಲಿದೆ ಎಂದಿದ್ದಾರೆ.