ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತಾಯಿ ಕಾಳಜಿಗೆ ಧನ್ಯವಾದ ಎಂದ ಸಿದ್ದರಾಮಯ್ಯ

05:23 PM Oct 19, 2024 IST | Samyukta Karnataka

ಬೆಂಗಳೂರು: ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ. ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ. ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ - ಕಾಳಜಿಗೆ ಧನ್ಯವಾದ. ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದಿದ್ದಾರೆ.

Tags :
#ಕಾಂಗ್ರೆಸ್‌#ಗೃಹಲಕ್ಷ್ಮೀ#ಗ್ಯಾರಂಟಿ#ಸಿದ್ದರಾಮಯ್ಯ
Next Article