For the best experience, open
https://m.samyuktakarnataka.in
on your mobile browser.

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಆರೋಪ

11:16 AM Sep 19, 2024 IST | Samyukta Karnataka
ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ  ಚಂದ್ರಬಾಬು ನಾಯ್ಡು ಆರೋಪ

ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ

ಅಮರಾವತಿ: ತಿರುಪತಿ ತಿರುಮಲದ ಬಾಲಾಜಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಬುಧವಾರ ನಡೆದ ಎನ್​ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಹೇಳಿದ್ದಾರೆ. ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ. ಇದರಿಂದಾಗಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ. ದೇವರಿಗೆ ಅರ್ಪಿಸುವ ನೈವೇದ್ಯವನ್ನು ಅಪವಿತ್ರಗೊಳಿಸಲಾಗಿದೆ, ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ. ಅವರು ‘ಅನ್ನದಾನ’ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ. ಆದರೆ, ನಾವು ಈಗ ಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ತಿರುಮಲ ತಿರುಪತಿ ದೇವಸ್ಥಾನ ಪಾವಿತ್ರ್ಯತೆಯನ್ನು ಕಾಪಾಡಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ

ದುರುದ್ದೇಶಪೂರಿತ ಟೀಕೆ: ಸಿಎಂ ನಾಯ್ಡು ಆರೋಪವನ್ನು ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷವು ತಳ್ಳಿಹಾಕಿದೆ. ಇದು ದುರುದ್ದೇಶಪೂರಿತವಾಗಿದೆ ಎಂದು ಟೀಕಿಸಿದೆ.

Tags :