For the best experience, open
https://m.samyuktakarnataka.in
on your mobile browser.

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು

11:40 AM Jul 21, 2024 IST | Samyukta Karnataka
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು 1ಲಕ್ಷ 12 ಸಾವಿರ ಕ್ಯುಸೆಕ್ ನಷ್ಟಿದ್ದು ಈ ಹಿನ್ನೆಲೆಯಲ್ಲಿ ಯಾವ ಕ್ಷಣದಲ್ಲಿಯಾದರೂ ನದಿಗೆ ನೀರು ಹರಿ ಬಿಡಲಾಗುವುದು ಎಂದು ತುಂಗಭದ್ರಾ ಮಂಡಳಿ ಅಲರ್ಟ್ ಸಂದೇಶ ರವಾನಿಸಿದೆ.
ಜಲಾಶಯದಿಂದ ನದಿಗೆ 4000 ಕ್ಯುಸೆಕ್‌ನಿಂದ 6000 ಕ್ಯುಸೆಕ್ ನೀರನ್ನು ನದಿಗೆ ಹರಿದು ಬಿಡಲಾಗುವುದು ಎಂದು ಜಲಾಶಯ ನದಿಪಾತ್ತದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
74.582 ಟಿಎಂಸಿ ನೀರು ಸಂಗ್ರಹವಾಗಿದೆ, 105.788 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯ ಒಳ ಹರಿವು ಒಂದು ಲಕ್ಷ ದಾಟಿರುವ ಹಿನ್ನೆಲೆ ಈಗ ನದಿಗೆ ನೀರು ಹರಿಸಲಾಗುವುದು ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.
ತುಂಗಭದ್ರಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ನದಿಪಾತ್ತದ ಜನರು ಎಚ್ಚರಿಕೆ ವಹಿಸಲು ಸೂಚಿಸಿದೆ.
ತುಂಗಭದ್ರಾ ಜಲಾಶಯ ರಾಜ್ಯದ ರಾಯಚೂರು, ಬಳ್ಳಾರಿ,, ಕೊಪ್ಪಳ, ವಿಜಯನಗರ ಜಿಲ್ಲೆಗಳಿಗೆ ನೀರು ಒದಗಿಸುತ್ತಿದೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ನೀರು ಒದಗಿಸುತ್ತದೆ.