ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ: 52,700 ಎಕರೆಗೆ ನೀರಾವರಿ ಸೌಲಭ್ಯ
10:08 AM Jan 21, 2025 IST | Samyukta Karnataka
3,048 ಎಕರೆ ಭೂ ಸ್ವಾಧೀನ; ರೂ. 457 ಕೋಟಿ ಬಿಡುಗಡೆಗೆ ಸೂಚನೆ
ಬೆಂಗಳೂರು: ವಿಜಯಪುರ ಜಿಲ್ಲೆಯ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಬರುವ ಭೂಸ್ವಾಧೀನ ಮತ್ತು ಸಂಬಂಧಿತ ಪರಿಹಾರ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಲು ವಿಧಾನಸೌಧದ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಹತ್ವದ ಸಭೆ ನಡೆಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, ರೂ. 457 ಕೋಟಿ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. 37,200 ಎಕರೆ ಜಮೀನು ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ ಎಂದಿದ್ದಾರೆ.