ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿ ಮಾಲ್‌ಗೆ ಬೀಗ
11:16 AM May 10, 2024 IST | Samyukta Karnataka
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ.
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿ ಅಧಿಕಾರಿಗಳ ತಂಡ ಮಂತ್ರಿಮಾಲ್‌ಗೆ ಬೀಗ ಹಾಕಿದೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ. ತೆರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಮಂತ್ರಿ ಮಾಲ್ ಲೈಸನ್ಸ್ ರದ್ದುಪಡಿಸಲಾಗಿದೆ ಎಂದು ನೋಟಿಸ್ ಅಂಟಿಸಲಾಗಿದೆ.