ಥರ್ಮಲ್ ಪವರ್ ಕಾರ್ಪೊರೇಷನ್‌ನಲ್ಲಿ ೨೨೩ ಹುದ್ದೆಗಳು
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆ) ಹುದ್ದೆ ಇವಾಗಿದ್ದು, ೨೨೩ ಉದ್ಯೋಗಿಗಳ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಫೆ.೮ ಕೊನೇ ದಿನ.
ವಿದ್ಯಾರ್ಹತೆ
ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ವಿಷಯಗಳಲ್ಲಿ ಪದವಿ ಪಡೆದಿರಬೇಕು. ಒಂದು ವರ್ಷ ಕಾರ್ಯಾನುಭವ ಹೊಂದಿರುವುದು ಕಡ್ಡಾಯ. ಸಾಮಾನ್ಯ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಪದವಿಯಲ್ಲಿ ಶೇ. ೪೦ರಷ್ಟು ಅಂಕ ಪಡೆದಿರಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲುಬಿಡಿ ಅಭ್ಯರ್ಥಿಗಳು ತೇರ್ಗಡೆಯಾಗಿದ್ದರೆ ಸಾಕು.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಟ ವಯಸ್ಸು ೩೫ ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಮೀಸಲಾತಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ೩೦೦ ರೂ. ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ೫೫,೦೦೦ ರೂ. ಮಾಸಿಕ ವೇತನ ದೊರೆಯಲಿದೆ.