ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಸಿದ್ಧಾಂತ, ಕಾರ್ಯಪದ್ಧತಿಯಲ್ಲಿ ರಾಜಿ ಮಾಡಿಕೊಂಡಿಲ್ಲ

07:47 PM Nov 21, 2023 IST | Samyukta Karnataka

ಮಂಗಳೂರು: ಜನಸಂಘದಿಂದ ತೊಡಗಿ ಈಗ ಬಿಜೆಪಿಯ ಸ್ವರ್ಣ ಯುಗವರೆಗೆ ಪಕ್ಷ ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ ಪಕ್ಷದ ಸಿದ್ಧಾಂತ ಮತ್ತು ಕಾರ್ಯಪದ್ಧತಿಯಲ್ಲಿ ಎಂದೂ ರಾಜಿ ಮಾಡಿಕೊಂಡಿಲ್ಲ. ಆಡಳಿತದಲ್ಲಿ ಪರಿವರ್ತನೆ ಬಿಜೆಪಿಯ ಲಕ್ಷಣವಾಗಿದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳವಾರ ನಗರದ ಸಂಘ ನಿಕೇತನದಲ್ಲಿ ಮಂಗಳೂರು ಮತ್ತು ಶಿವಮೊಗ್ಗ ವಿಭಾಗದ ನಗರಸಭಾ ಸದಸ್ಯರ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು. ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎನ್ನುವ ಪರಿಕಲ್ಪನೆಯಡಿ ಪಕ್ಷದ ಕಾರ್ಯಪದ್ಧತಿಯಲ್ಲಿ ಒಂದಾಗಿರುವ ಪ್ರಶಿಕ್ಷಣ ವರ್ಗವನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಕಾರ್ಯಕರ್ತನನ್ನು ಬೆಳೆಸಿ ನಾಯಕನನ್ನಾಗಿ ಮಾಡುವುದು, ಆತನ ಮೂಲಕ ರಾಷ್ಟ್ರ ನಿರ್ಮಾಣ ಮಾಡುವುದು ಬಿಜೆಪಿಯ ವಿಶೇಷತೆ. ಆತನಿಗೆ ಗೊತ್ತಿಲ್ಲದ ವಿಚಾರಗಳನ್ನು ಹೇಳುವುದರ ಜತೆಗೆ ಆತನಿಗೆ ಪಕ್ಷದ ವಿಚಾರಧಾರೆಯನ್ನು ತಿಳಿಸಿ ಮತ್ತಷ್ಟುಗಟ್ಟಿಗೊಳಿಸುವ ಕಾರ್ಯವನ್ನು ಪ್ರಶಿಕ್ಷಣದ ವರ್ಗದ ಮೂಲಕ ಮಾಡಲಾಗುತ್ತದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ಜನಪ್ರತಿನಿಧಿಗಳನ್ನು ಟೀಕಿಸುವ ಹಕ್ಕು ಮತದಾರನಿಗೆ ಇದ್ದೇ ಇದೆ. ಹತ್ತಾರು ವರ್ಷಗಳ ಕಾಲ ಪಕ್ಷದ ಸಿದ್ಧಾಂತದ ಮೂಲಕ ಗೆಲುವು ದಾಖಲಿಸಿಕೊಳ್ಳುವಂತಹ ಕೆಲಸವಾಗಬೇಕು. ಪ್ರಧಾನಿ ವಾಜಪೇಯಿ ಅವರ ಕಾಲದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ಏರಿತ್ತು. ಕಳೆದ ಒಂಬತ್ತು ವರ್ಷದಲ್ಲಿ ಜಗತ್ತು ಭಾರತದ ಕಡೆಗೆ ನೋಡುವಂತೆ ಪ್ರಧಾನಿ ಮೋದಿಯವರು ಮಾಡಿದ್ದಾರೆ. ಸಾಮಾನ್ಯದಿಂದ ಅಸಾಮಾನ್ಯದವರೆಗೆ ದೇಶ ಪರಿವರ್ತನೆಯಾಗಿದೆ ಎಂದರು.
ರಾಜ್ಯ ಸಂಚಾಲಕ ಶ್ರೀಕಾಂತ್ ಕುಲಕರ್ಣಿ ಮಾತನಾಡಿ, ಪಕ್ಷದ ಆತ್ಮವೇ ಸಂಘಟನೆ. ಸಂಘಟನೆಯಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಸರಿಯಾದ ಸಂಸ್ಕಾರ ಕೊಟ್ಟು ಸರಿಯಾದ ದಿಕ್ಕಿನಲ್ಲಿ ಕೆಲಸ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸುವುದು ಪ್ರಶಿಕ್ಷಣ ವರ್ಗದ ಉದ್ದೇಶ. ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಇದರ ಹೊರತಾಗಿಯೂ ಸಂಘಟನೆಯನ್ನು ಗಟ್ಟಿಮಾಡುವುದು ಪಕ್ಷದ ವಿಶೇಷತೆಯಾಗಿದ್ದು, ಪ್ರಶಿಕ್ಷಣ ವರ್ಗದ ಮೂಲಕ ಈ ಪ್ರಕ್ರಿಯೆ ನಡೆಯುತ್ತಿರುತ್ತದೆ ಎಂದರು.

Next Article