For the best experience, open
https://m.samyuktakarnataka.in
on your mobile browser.

ಸಂಸದರ ಮನೆಗೆ ಮುತ್ತಿಗೆ ಯತ್ನ: ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ

07:19 PM Feb 08, 2024 IST | Samyukta Karnataka
ಸಂಸದರ ಮನೆಗೆ ಮುತ್ತಿಗೆ ಯತ್ನ  ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ

ಮಂಗಳೂರು: ಅನುದಾನ ನೀಡುವಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ ತಾರತಮ್ಯ ಎಸಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರ ಉರ್ವದಲ್ಲಿರುವ ಮನೆಗೆ ಎನ್.ಎಸ್.ಯು.ಐ. ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ ನಡೆಯಿತು.
ಎನ್.ಎಸ್.ಯು.ಐ. ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವ ಬಳಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.
ಸಂಸದರ ಮನೆಯೆದುರು ಜಮಾಯಿಸಿದ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳನ್ನು ಬಳಸಿ ತಡೆದರು.
ಸುಹಾನ್ ಆಳ್ವ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಶಾಲಾ ಕಾಲೇಜುಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನೀಡುವ ಅನುದಾನದಲ್ಲಿ ತಾರಮತ್ಯ ಮಾಡಲಾಗುತ್ತಿದೆ. ನಮ್ಮ ತೆರಿಗೆ ಹಣ ನಮಗೆ ನೀಡಲು ನಿರಾಕರಿಸಲಾಗುತ್ತಿದೆ. ಜಿಲ್ಲೆಗೆ ಸಂಸದ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಮುತ್ತಿಗೆ ಯತ್ನ ನಡೆಸಿದ ವೇಳೆ ಅಲ್ಲಿದ್ದ ಉರ್ವಾ ಠಾಣಾಧಿಕಾರಿ ಭಾರತಿ ತಡೆದಾಗ ಎನ್.ಎಸ್.ಯು.ಐ. ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾರಿಕೇಡ್ ತಳ್ಳಿ ಮುತ್ತಿಗೆಗೆ ಮುಂದಾದಾಗ ಪೊಲೀಸರು ಎನ್.ಎಸ್.ಯು.ಐ. ಕಾರ್ಯಕರ್ತರನ್ನು ವಶಕ್ಕೆ ಪಡೆದರು.