ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದತ್ತಪೀಠ ಆವರಣದ ಗೋರಿ ಹಾನಿ: 14 ಜನ ಆರೋಪಿಗಳಿಗೆ ಸಮನ್ಸ್

05:00 PM Jan 04, 2024 IST | Samyukta Karnataka

ಚಿಕ್ಕಮಗಳೂರು: 2017 ರಲ್ಲಿ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ದತ್ತಪೀಠ ಆವರಣದ ಗೋರಿ ಹಾನಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಎಲ್ಲಾ 14 ಜನ ಆರೋಪಿಗಳಿಗೆ ಸಮನ್ಸ್ ನೀಡಿದ್ದಾರೆ.
2017 ರ ದತ್ತಜಯಂತಿ ವೇಳೆ ದತ್ತಭಕ್ತರ ಮೇಲೆ ದಾಖಲಾಗಿದ್ದ ಗೋರಿ ಹಾನಿ ಪ್ರಕರಣದಲ್ಲಿ ಕಳೆದ ಡಿಸೆಂಬರ್ 6 ರಂದು ನ್ಯಾಯಾಲಯಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ಎಲ್ಲಾ 14 ಜನ ಆರೋಪಿತರಿಗೆ ಕೋರ್ಟ್ ಸಮನ್ಸ್ ನೀಡಿದೆ. ಕಳೆದ 6 ವರ್ಷಗಳ ಹಿಂದೆ ದಾಖಲಾಗಿದ್ದ ಕೇಸ್ ಗೆ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ನೀಡಿತ್ತು. ಇದೀಗ 14 ಜನರ ಮೇಲಿನ ಕೇಸ್ ನ ಆರೋಪಿಗಳಾದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್ ರಾಮುಗೆ ಪೊಲೀಸರು ಸಮನ್ಸ್ ನೀಡಿದ್ದು , ಎಲ್ಲಾ ಆರೋಪಿಗಳಿಗೂ ಇದೇ ಜನವರಿ 8 ನೇ ತಾರೀಖು ಕೋರ್ಟಿಗೆ ಹಾಜರಾಗುವಂತೆ ಸೂಚನೆ ಸಹಾ ನೀಡಲಾಗಿದೆ.
ಕೋರ್ಟ್ ಸಮನ್ಸ್ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಅಮಟೆ ಸ್ಪಷ್ಟನೆ ನೀಡಿದ್ದು ಜಿಲ್ಲೆಯಲ್ಲಿ ಯಾವುದೇ ಹಳೇ ಪ್ರಕರಣಗಳ ರೀ ಒಪನ್ ಆಗಿಲ್ಲ , ಕೆಲ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.

Next Article