ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದಸರಾ ಪ್ರಯುಕ್ತ ವಿಶೇಷ ವ್ಯವಸ್ಥೆ: 34 ರೈಲುಗಳಿಗೆ ಹೆಚ್ಚುವರಿ ಬೋಗಿ

09:50 PM Sep 20, 2024 IST | Samyukta Karnataka

ಹುಬ್ಬಳ್ಳಿ: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು ೩೪ ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ.
ಅಕ್ಟೋಬರ್ ೪ ರಿಂದ ೧೫ ರವರೆಗೆ ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅ. ೧ ರಿಂದ ೧೨ ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್, ಅ. ೨ ರಿಂದ ೧೩ ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್, ಅ. ೨ ರಿಂದ ೧೩ ರವರೆಗೆ ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್ ಮತ್ತು ಅ. ೩ ರಿಂದ ೧೪ ರವರೆಗೆ ಬಾಗಲಕೋಟೆ-ಮೈಸೂರು ಬಸವ ಎಕ್ಸ್ಪ್ರೆಸ್, ಅ. ೧ ರಿಂದ ೧೨ ರವರೆಗೆ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್, ಅ. ೪ ರಿಂದ ೧೫ ರವರೆಗೆ ಮೈಸೂರು-ಎಕ್ಸ್ಪ್ರೆಸ್, ಹುಬ್ಬಳ್ಳಿ-ಹಂಪಿ ಎಕ್ಸ್ಪ್ರೆಸ್, ಅ. ೨ ರಿಂದ ೧೩ ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ ಮತ್ತು ಅ. ೩ ರಿಂದ ೧೪ ರವರೆಗೆ ಪಂಢರಪುರ-ಗೋಲಗುಂಬಜ್ ಎಕ್ಸ್ಪ್ರೆಸ್ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.
ಅ. ೩ ರಿಂದ ೧೨ ರವರೆಗೆ ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ಮತ್ತು ಅ. ೪ ರಿಂದ ೧೩ ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.
ಅ. ೪ ರಿಂದ ೧೩ ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅ. ೪ ರಿಂದ ೧೩ ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್, ಅ. ೩ ರಿಂದ ೧೨ ರವರೆಗೆ ಕೆಎಸ್‌ಆರ್ ಬೆಂಗಳೂರು-ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್, ಅ. ೩ ರಿಂದ ೧೨ ರವರೆಗೆ ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್, ಅ. ೩ ರಿಂದ ೧೨ ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್, ಅ. ೫ ರಿಂದ ೧೪ ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್, ಅ. ೩ ರಿಂದ ೧೨ ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್, ಅ. ೫ ರಿಂದ ೧೪ ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್ಪ್ರೆಸ್, ಅ. ೩ ರಿಂದ ೧೨ ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್, ಅ. ೫ ರಿಂದ ೧೪ ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್, ಅ. ೪ ರಿಂದ ೧೩ ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್, ಅ. ೧ ರಿಂದ ೧೨ ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್, ಅ. ೪ ರಿಂದ ೧೫ ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್, ಅ. ೧ ರಿಂದ ೧೨ ರವರೆಗೆ ಮೈಸೂರು-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ಬೆಂಗಳೂರು ಪ್ಯಾಸೆಂಜರ್, ಅ. ೩ ರಿಂದ ೧೪ ರವರೆಗೆ ಎಸ್‌ಎಂವಿಟಿ ಬೆಂಗಳೂರು-ಮೈಸೂರು, ಅ. ೨ ರಿಂದ ೧೩ ರವರೆಗೆ ಎಸ್‌ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್ಪ್ರೆಸ್ ಮತ್ತು ಅ. ೩ ರಿಂದ ೧೪ ರವರೆಗೆ ಕರೈಕಲ್-ಎಸ್‌ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
#Railway#Trainshubli
Next Article