For the best experience, open
https://m.samyuktakarnataka.in
on your mobile browser.

ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಂಚು

01:22 PM Apr 12, 2024 IST | Samyukta Karnataka
ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಂಚು

ನವದೆಹಲಿ: ಭಾರತೀಯ ಜನತಾ ಪಕ್ಷವು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಪ್ರಯತ್ನಿಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಸರಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿಯೊಂದು ನಡೆಯುತ್ತಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದು ಬಂದಿದೆ, ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ, ದೆಹಲಿ ಸರ್ಕಾರದ ಹಲವು ಇಲಾಖೆಗಳಲ್ಲಿ ಹಲವಾರು ಹುದ್ದೆಗಳು ಖಾಲಿಯಿದ್ದರೂ ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿಲ್ಲ ಎಂದು ಅತಿಶಿ ತಿಳಿಸಿದ್ದಾರೆ. ಯಾವುದೇ ಪುರಾವೆಗಳಿಲ್ಲದಿದ್ದರೂ ಸುಳ್ಳು ಪ್ರಕರಣದ ಮೇಲೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ನಾವು ಹಿಂದಿನ ಕೆಲವು ಸಂಗತಿಗಳತ್ತ ನೋಡಿದಾಗ, ಯೋಜಿತ ಪಿತೂರಿಯೊಂದು ನಡೆಯುತ್ತಿರುವುದು ಕಂಡು ಬರುತ್ತಿದೆ. ದೆಹಲಿಯ ಆಪ್ತ ಸಹಾಯಕನನ್ನು ಪದಚ್ಯುತಗೊಳಿಸಿದ್ದು ಕೂಡ ಪಿತೂರಿಯಾಗಿದೆ ಎಂದು ಅತಿಶಿ ಆರೋಪಿಸಿದ್ದಾರೆ. ಅತಿಶಿ ನೀಡಿರುವ ಎಲ್ಲ ಹೇಳಿಕೆಗಳನ್ನು ಬಿಜೆಪಿ ನಿರಾಕರಿಸಿದ್ದು, ನಿತ್ಯವೂ ಒಂದೊಂದು ಹೊಸ ಕತೆಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂದು ತಿಳಿಸಿದೆ.