ದೀಪಾವಳಿ ಹಬ್ಬಕ್ಕೆ ವಿಶೇಷ ರೈಲುಗಳ ಸಂಚಾರ
ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (೦೭೩೧೧/೦೭೩೧೨) ರೈಲು ಸಂಚರಿಸಲಿದೆ.
ಈ ರೈಲು ನವೆಂಬರ್ ೨ರಂದು ಶ್ರೀ ಸಿದ್ದಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ (ರೈಲು ಸಂಖ್ಯೆ ೦೭೩೧೧ ) ಸಂಜೆ ೪ ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ ೧೧.೨೫ ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ನವೆಂಬರ್ ೩, ೨೦೨೪ ರಂದು ಮಂಗಳೂರು ಜಂಕ್ಷನ್‌ನಿಂದ(ರೈಲು ಸಂಖ್ಯೆ ೦೭೩೧೨) ಮಧ್ಯಾಹ್ನ ೧ ಗಂಟೆಗೆ ಹೊರಟು ಮರುದಿನ ಅಂದರೆ ನ. ೪ರಂದು ಬೆಳಗ್ಗೆ ೭ ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.
ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.
ಈ ರೈಲಿನಲ್ಲಿ ೧ ಎಸಿ ಟು ಟೈಯರ್, ೨ ಫಸ್ಟ್ ಎಸಿ ಕಮ್ ಎಸಿ ತ್ರಿ ಟೈಯರ್, ೩ ಎಸಿ ತ್ರಿ ಟೈಯರ್, ೫ ಸ್ಲೀಪರ್ ಕ್ಲಾಸ್, ೨ ಸಾಮಾನ್ಯ ದ್ವಿತೀಯ ದರ್ಜೆ ಮತ್ತು ೨ ಸೆಕೆಂಡ್ ಕ್ಲಾಸ್ ಲಗೇಜ್/ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ ೧೫ ಬೋಗಿಗಳು ಇರಲಿವೆ.
ಈ ವಿಶೇಷ ರೈಲುಗಳು ಹಬ್ಬದ ಋತುವಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವರ್ಧಿತ ಸಂಪರ್ಕ ಮತ್ತು ಅನುಕೂಲವನ್ನು ಒದಗಿಸುತ್ತವೆ.
ಪ್ರಯಾಣಿಕರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಥವಾ ೧೩೯ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು. ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.