For the best experience, open
https://m.samyuktakarnataka.in
on your mobile browser.

ದೀಪಾವಳಿ ಹಬ್ಬ: ಏಕಮುಖ ವಿಶೇಷ ರೈಲುಗಳ ಸಂಚಾರ

05:59 PM Oct 24, 2024 IST | Samyukta Karnataka
ದೀಪಾವಳಿ ಹಬ್ಬ  ಏಕಮುಖ ವಿಶೇಷ ರೈಲುಗಳ ಸಂಚಾರ

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ ನೈಋತ್ಯ ರೈಲ್ವೆ ವಲಯ ತಿಳಿಸಿದೆ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 30, 2024 ರಂದು (ಬುಧವಾರ) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 3:45 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 07324 ಯಶವಂತಪುರ-ಕಲಬುರಗಿ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 30, 2024ರಂದು (ಬುಧವಾರ) ಯಶವಂತಪುರದಿಂದ ಸಂಜೆ 5:15 ಕ್ಕೆ ಹೊರಟು, ಮರುದಿನ ಅಂದರೆ ಅಕ್ಟೋಬರ್ 31, 2024 ರಂದು (ಗುರುವಾರ) ಬೆಳಗಿನ ಜಾವ 4:15 ಕ್ಕೆ ಕಲಬುರಗಿ ತಲುಪಲಿದೆ. ಮಾರ್ಗದಲ್ಲಿ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 07325 ಕಲಬುರಗಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 31, 2024ರಂದು (ಗುರುವಾರ) ಕಲಬುರಗಿಯಿಂದ ಬೆಳಿಗ್ಗೆ 6:15ಕ್ಕೆ ಹೊರಟು ಅದೇ ದಿನ ಸಂಜೆ 4:00 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ಮಾರ್ಗದಲ್ಲಿ ಈ ರೈಲು ಶಹಾಬಾದ್, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯಂ ರೋಡ್, ಆದೋನಿ, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಕೊಪ್ಪಳ ಮತ್ತು ಗದಗ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ ಎಂದು ತಿಳಿಸಲಾಗಿದ

ಮೇಲೆ ತಿಳಿಸಿದ ಈ ವಿಶೇಷ ರೈಲುಗಳು (07323, 07324, ಮತ್ತು 07325) 1 ಎಸಿ ಫಸ್ಟ್ ಕ್ಲಾಸ್, 2 ಎಸಿ 2 ಟೈರ್, 4 ಎಸಿ 3 ಟೈರ್, 3 ಎಸಿ 3-ಟೈರ್ ಎಕಾನಮಿ, 6 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್, 1 ಪ್ಯಾಂಟ್ರಿ ಕಾರ್ ಮತ್ತು 2 ಲಗೇಜ್ ಬ್ರೇಕ್ ಮತ್ತು ಜನರೇಟರ್ ಕಾರುಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು ಎಂದು ನೈಋತ್ಯ ರೈಲ್ವೆ ವಲಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.