ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇಗುಲಗಳಲ್ಲಿ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಆದೇಶ

11:21 PM Mar 04, 2024 IST | Samyukta Karnataka

ಬೆಂಗಳೂರು: ಬೇಸಿಗೆ ಸಂದರ್ಭದಲ್ಲಿ ರಾಜ್ಯದ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ ರಾಜ್ಯ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸಚಿವ ರಾಮಲಿಂಗಾರೆಡ್ಡಿ ಅವರ ನಿರ್ದೇಶನದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಿರುವ ಮುಜರಾಯಿ ಆಯುಕ್ತರು, ರಾಜ್ಯದ ದೇವಾಲಯಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಪೆಂಡಾಲ್ ಹಾಕಬೇಕು, ಕುಡಿಯುವ ನೀರಿನ ವ್ಯವಸ್ಥೆ ಸಹಿತ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ, ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಹಾಗೂ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸೂಚಿಸಿದ್ದಾರೆ.
ಸುತ್ತೋಲೆಯಲ್ಲಿ ಏನಿದೆ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಹುತೇಕ ಪ್ರಮುಖ ಅಧಿಸೂಚಿತ ದೇವಾಲಯಗಳಲ್ಲಿ ಬೇಸಿಗೆ ಕಾಲದ ಸಂದರ್ಭ ರೂಢಿ ಮತ್ತು ಸಂಪ್ರದಾಯಗಳು ಬಹಳ ಹಿಂದಿನಿಂದಲೂ ಜಾರಿಯಲ್ಲಿವೆ. ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಂತಹ `ಶಕ್ತಿ ಯೋಜನೆ'ಯನ್ನು ಜಾರಿಗೆ ತಂದಿರುವುದು ಹಾಗೂ ಈ ಸಮಯಗಳಲ್ಲಿ ಶಾಲೆ ಮತ್ತು ಕಾಲೇಜುಗಳ ರಜೆಯಿಂದಾಗಿ ದೂರದ ಊರುಗಳಿಂದ, ಜಿಲ್ಲೆಗಳಿಂದ ಹಾಗೂ ಇತರೆ ರಾಜ್ಯಗಳಿಂದ ಮಾತ್ರವಲ್ಲದೇ ವಿದೇಶಗಳಿಂದಲೂ ಸಹ ಭಕ್ತಾದಿಗಳು ಮತ್ತು ಯಾತ್ರಾರ್ಥಿಗಳು ದೇವಾಲಯಗಳಿಗೆ ಭೇಟಿ ನೀಡುವುದು ಗಮನಾರ್ಹವಾಗಿದೆ.

Next Article