For the best experience, open
https://m.samyuktakarnataka.in
on your mobile browser.

`ದೇಶದಲ್ಲಿ ಕಾಂಗ್ರೆಸ್ ೫೦ ಸ್ಥಾನ ಕೂಡ ಗೆಲ್ಲಲ್ಲ'

08:05 PM Apr 02, 2024 IST | Samyukta Karnataka
 ದೇಶದಲ್ಲಿ ಕಾಂಗ್ರೆಸ್ ೫೦ ಸ್ಥಾನ ಕೂಡ ಗೆಲ್ಲಲ್ಲ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನಾಲ್ಕನೂರಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಬಿಜೆಪಿ ಸಂಸದರು ಬೇಕೋ ಅಥವಾ ೫೦ ಸ್ಥಾನ ಗೆಲ್ಲುವಷ್ಟೂ ಗತಿಯಿಲ್ಲದ ಕಾಂಗ್ರೆಸ್ ಬೇಕೋ ಎನ್ನುವುದನ್ನು ಪ್ರಜ್ಞಾವಂತ ಮತದಾರರು ಚಿಂತನೆ ಮಾಡಬೇಕಾದ ಅವಶ್ಯಕತೆಯಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಸೋಮವಾರ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರಂತಹ ಬಲಾಢ್ಯ ನಾಯಕತ್ವ ಒಂದು ಕಡೆಯಾದರೆ, ಮತ್ತೊಂದು ಕಡೆಗೆ ಕಾಂಗ್ರೆಸ್‌ನ ದುರ್ಬಲ ನಾಯಕತ್ವವಿದೆ. ಈ ಚುನಾವಣೆಯಲ್ಲಿ ಬಿಜೆಪಿ ನಾಲ್ಕನೂರಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.