For the best experience, open
https://m.samyuktakarnataka.in
on your mobile browser.

ದೇಶದಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ

03:27 PM Aug 06, 2024 IST | Samyukta Karnataka
ದೇಶದಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ

ನವದೆಹಲಿ: ದೇಶದಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಮಾತನಾಡಿರುವ ಅವರು 60 ವರ್ಷಗಳ ಕಾಲ ದೇಶ ಮತ್ತು ರಾಜ್ಯವನ್ನು ಆಳಿದ ನಂತರ ದೇಶದ 60-70% ಕ್ಕಿಂತ ಹೆಚ್ಚು ಜನಸಂಖ್ಯೆಯು ಬಡವರಾಗಿದ್ದರು ಎಂದರೆ, ಅದಕ್ಕೆ ಕಾಂಗ್ರೆಸ್‌ನವರೇ ಹೊಣೆ. ವಿಶ್ವಬ್ಯಾಂಕ್ ಪ್ರಕಾರ ಕಳೆದ 10 ವರ್ಷದಲ್ಲಿ 13 ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ ಮತ್ತು ನೀತಿ ಆಯೋಗದ ಪ್ರಕಾರ ದೇಶದಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ , ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯು ವಿಶ್ವದ ಅತಿದೊಡ್ಡ ಆಹಾರ ಭದ್ರತಾ ಕಾರ್ಯಕ್ರಮವಾಗಿದೆ. ದೇಶದಾದ್ಯಂತ ಪ್ರತಿ ವರ್ಷ 495 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ. 2023-24 ರಲ್ಲಿ ಭಾರತ ಸರ್ಕಾರ 2.11 ಲಕ್ಷ ಕೋಟಿ ರೂಪಾಯಿಗಳನ್ನು ಈ ಯೋಜನೆಗೆ ಭರಿಸಿದೆ ಮತ್ತು ಈ ವರ್ಷ ನಾವು ಈ ಕಾರ್ಯಕ್ರಮಕ್ಕಾಗಿ ಅಂದಾಜು 2.05 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಿದ್ದೇವೆ ಎಂದರು.

Tags :