ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇಶದ ಅತ್ಯಂತ ಕಿರಿಯ ಪೈಲಟ್ ವಿಜಯಪುರದ ಸಮೈರಾ

10:32 AM Dec 03, 2024 IST | Samyukta Karnataka

ವಿಜಯಪುರ: ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ತಮ್ಮ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ (CPL) ಪಡೆಯುವ ಮೂಲಕ ದೇಶದ ಅತ್ಯಂತ ಕಿರಿಯ ಪೈಲಟ್ ಎನಿಸಿಕೊಂಡಿದ್ದಾರೆ.
ಸಮೀರಾ ಅವರು ಆರು ತಿಂಗಳ ಕಾಲ ವಾಯುಯಾನ ತರಬೇತಿಯನ್ನು ವಿನೋದ್ ಯಾದವ್ ಏವಿಯೇಷನ್ ​​ಅಕಾಡೆಮಿಯಲ್ಲಿ ಪಡೆದರು. ಅಕಾಡೆಮಿ ಸಂಸ್ಥಾಪಕರಾದ ವಿನೋದ್ ಯಾದವ್ ಮತ್ತು ಕ್ಯಾಪ್ಟನ್ ತಪೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮೊದಲ ಪ್ರಯತ್ನದಲ್ಲೇ ಎಲ್ಲ ಸಿಪಿಎಲ್​ ಪರೀಕ್ಷೆಗಳಲ್ಲಿ ಉತ್ತೀರ್ಣರಾದರು. ಸಮೈರಾ ಪ್ರಾಥಮಿಕ, ಪ್ರೌಢ, ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ವಿಜಯಪುರದಲ್ಲಿ ಮುಗಿಸಿದ್ದಾರೆ. ನಂತರ ನೇರವಾಗಿ ದೆಹಲಿಯಲ್ಲಿ 6 ತಿಂಗಳ ಪೈಲಟ್ ಟ್ರೈನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿದ್ದಾರೆ. ಇನ್ನು 25ನೇ ವಯಸ್ಸಿಗೆ ಪೈಲಟ್ ಆದ ಕ್ಯಾಪ್ಟನ್ ತಪೇಶ್​ ಕುಮಾರ್​ ಅವರಿಂದ ಪ್ರೇರಣೆ ಪಡೆದು, ಇವತ್ತು ಈ ಸಾಧನೆ ಮಾಡಿರುವುದು ಮಾತ್ರವಲ್ಲದೇ ಅವರ ದಾಖಲೆಯನ್ನು ಮುರಿದು ಮುಂದೆ ಸಾಗಿದ್ದಾರೆ.

ಎಂ ಬಿ ಪಾಟೀಲ್​ ಅಭಿನಂದನೆ: ಬಸವನಾಡು ಮತ್ತು ರಾಜ್ಯದ ಗೌರವವನ್ನು ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ ದೇಶದ ಅತಿ ಕಿರಿಯ ವಯಸ್ಸಿನ ಪೈಲಟ್ ಕು|| ಸಮೈರಾ ಹುಲ್ಲೂರರಿಗೆ ಸಚಿವ ಎಂ. ಬಿ. ಪಾಟೀಲ್‌ ಅಭಿನಂದನೆಗಳು ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೇವಲ 18ನೇ ವಯಸ್ಸಿನಲ್ಲಿ ಇಂತಹ ಅಸಾಧಾರಣ ಸಾಧನೆ ಮಾಡುವ ಮೂಲಕ ಲಕ್ಷಾಂತರ ಯುವಕ-ಯುವತಿಯರಿಗೆ ಸ್ಫೂರ್ತಿಯಾಗಿರುವ ವಿಜಯಪುರದ ಈ ಯುವ ಪ್ರತಿಭೆಯ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Tags :
#SamairaHullur#ಎಂಬಿಪಾಟೀಲ್‌#ವಿಜಯಪುರ
Next Article