ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕ
ಬೆಂಗಳೂರು: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ 2047 ಕ್ಕೆ ವಿಕಸಿತ ಭಾರತ ಸಂಕಲ್ಪವನ್ನು ಬಜೆಟ್ ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಮಧ್ಯಂತರ ಬಜೆಟ್ ಭಾರತದ ಆರ್ಥಿಕತೆ ಅಭಿವೃದ್ಧಿಗೆ ಪೂರಕವಾಗಿದೆ. ಯುವ ಸಬಲೀಕರಣ, ರೈತರ ಕ್ಷೇಮಾಭಿವೃದ್ಧಿ, ನಾರಿ ಶಕ್ತಿ, ಬಡವರ ಕಲ್ಯಾಣ ಸೇರಿದಂತೆ ವಿವಿಧ ವಲಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಆ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಜೆಟ್ ಪೂರಕವಾಗಿದೆ. ಆಯುಷ್ಮಾನ್ ಭಾರತ ಯೋಜನೆ ವಿಸ್ತರಣೆ, ಸ್ಕೀಲ್ ಇಂಡಿಯಾ ಯೋಜನೆಯಡಿ ಯುವಕರಿಗೆ ತರಬೇತಿ, ರಾಷ್ಟ್ರೀಯ ಶಿಕ್ಷಣ ನೀತಿ, ಕನಿಷ್ಠ ಬೆಂಬಲ ಬೆಲೆ ನಿಯಮಿತ ಏರಿಕೆ, ವೈದ್ಯಕೀಯ, ಕೈಗಾರಿಕೆ, ಪ್ರವಾಸೋದ್ಯಮ, ಆರ್ಥಿಕ ಕಾರಿಡಾರ್ ವಿವಿಧ ವಲಯಗಳಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆಗಳಿಗೆ ಬಜೆಟ್ ನಲ್ಲಿ ನಾಂದಿ ಹಾಡಲಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ 2047 ಕ್ಕೆ ವಿಕಸಿತ ಭಾರತ ಸಂಕಲ್ಪವನ್ನು ಬಜೆಟ್ ಹೊಂದಿದೆ. ಅತ್ಯುತ್ತಮ ಮತ್ತು ಅಭಿವೃದ್ಧಿಗೆ ಪೂರಕವಾಗಿರುವ ಬಜೆಟ್ ನೀಡಿದ್ದಕ್ಕಾಗಿ, ಸನ್ಮಾನ್ಯ ಪ್ರಧಾನ ಮಂತ್ರಿಗ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.