ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭಯಾನಕ ಸ್ಫೋಟ : 9 ಮಂದಿ ಸಾವು

01:42 PM Dec 17, 2023 IST | Samyukta Karnataka

ಮಹರಾಷ್ಟ್ರ: ಸೋಲಾರ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಬಝರ್​ಗಾಂವ್​ನಲ್ಲಿ ಈ ದುರ್ಘಟನೆ ನಡೆದಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟವಾದ ಸೋಲಾರ್ ಕಂಪನಿಯಿಂದ ಸದ್ಯ 9 ಮೃತ ದೇಹಗಳನ್ನು ಹೊರಗಡೆ ತೆಗೆಯಲಾಗಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮಾರ್ನಿಂಗ್‌ ಶಿಫ್ಟ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಈ ಬ್ಲಾಸ್ಟ್ ಸಂಭವಿಸಿದೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸ್ಫೋಟದ ಬಳಿಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Next Article