For the best experience, open
https://m.samyuktakarnataka.in
on your mobile browser.

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

03:52 PM May 21, 2024 IST | Samyukta Karnataka
ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು. 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಫಲಿತಾಂಶವನ್ನು ಎನ್‌ಐಸಿ ವೆಬ್‌ಸೈಟ್‌ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಏಪ್ರಿಲ್‌ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆ ನಡೆದಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ. 26,496 ಬಾಲಕರು, 26,009 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ನೋಡಬಹುದಾಗಿದೆ. ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ 11589 (22.24%) ವಾಣಿಜ್ಯ ವಿಭಾಗದಲ್ಲಿ 8709 (22.06%) ಮತ್ತು ವಿಜ್ಞಾನ ವಿಭಾಗದಲ್ಲಿ- 32207 (56.16%) ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳಲ್ಲಿ ಫಲಿತಾಂಶ ಸುಧಾರಣೆ ಬಯಸಿದ 32940 ವಿದ್ಯಾರ್ಥಿಗಳು ಇದ್ದಾರೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಗೆ ಅರ್ಜಿ ಸಲ್ಲಿಕೆ ಕೊನೆ ದಿನ ಮೇ 23, ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಕೊನೆ ದಿನ ಮೇ 25 ಆಗಿದೆ.