ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದ್ವೇಷದ ರಾಜಕಾರಣ ಮಾಡಿಲ್ಲ

01:57 PM Jan 02, 2024 IST | Samyukta Karnataka

ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ

ಕೊಪ್ಪಳ: ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ನಾವು ಯಾವುದೇ ರೀತಿಯ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನ್ಯಾಯಾಲಯದ ಸೂಚನೆ ಇದ್ದರೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು, ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ಆ ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Next Article