ಧರಣಿ ಕೂತ ರಾಜ್ಯಪಾಲರು
01:45 PM Jan 27, 2024 IST | Samyukta Karnataka
ಕೇರಳ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಎಸ್‌ಎಫ್‌ಐ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ. ಇದರಿಂದ ಕುಪಿತಗೊಂಡ ರಾಜ್ಯಪಾಲರು ಪ್ರತಿಭಟನಾಕಾರರಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವವರೆಗೂ ನಾನು ಇಲ್ಲಿಂದ ತೆರಳುವುದಿಲ್ಲ ಎಂದು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಎಫ್ಐ ವಿರುದ್ಧ ಗುಡುಗಿದ ರಾಜ್ಯಪಾಲರು ವಾಹನದಿಂದ ಕೆಳಗಿಳಿದು ಎಸ್ಎಫ್ಐ ಕಾರ್ಯಕರ್ತರು ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರತಿಭಟನಾಕಾರರಿಗೆ ರಕ್ಷಣೆ ನೀಡುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸದೆ ಅಲ್ಲಿಂದ ಕದಲುವುದಿಲ್ಲ ಎಂಬ ದೃಢ ನಿಲುವಿನಿಂದ ರಾಜ್ಯಪಾಲರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.