ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಧರ್ಮಸ್ಥಳದಲ್ಲಿ ಯಾತ್ರಾರ್ಥಿಗಳ ಬ್ಯಾಗ್ ಗೆ ಕನ್ನ: ನಗದು ಸಹಿತ ಲಕ್ಷಾಂತರ ರೂ. ಚಿನ್ನಾಭರಣ ಕಳವು

09:05 AM Nov 28, 2024 IST | Samyukta Karnataka

ಬೆಳ್ತಂಗಡಿ : ದೇವರ ದರುಶನಕ್ಕಾಗಿ ಬಂದಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ ಘಟನೆ ಧರ್ಮಸ್ಥಳದಲ್ಲಿ ನ. 24ರಂದು ನಡೆದಿದೆ.

ಉಡುಪಿ ಜಿಲ್ಲೆಯ ಕಾಪು ಕೋಟಿ ಗ್ರಾಮದ ಜೋಗಿ ಕಂಪೌಂಡ್‌ನ ನಿವಾಸಿ ಗಾಯತ್ರಿ ಆರ್.ಜೋಗಿ ಎಂಬವರಿಗೆ ಸೇರಿದ ಬ್ಯಾಗ್‌ನಲ್ಲಿದ್ದ ರೂ.10 ಸಾವಿರ ನಗದು ಹಾಗೂ ರೂ.12.80 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದಾರೆ.

ಗಾಯತ್ರಿ ಅವರು ತಮ್ಮ ಮಗಳು ರಜಿತ, ಅಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿರವರ ಜೊತೆ ನ.24 ರಂದು ಬೆಳಿಗ್ಗೆ 10 ಗಂಟೆಗೆ ತನ್ನ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗಲ್ಲಿ ತನ್ನ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸಿನಲ್ಲಿ ಇಟ್ಟು ರೂ.10 ಸಾವಿರ ನಗದನ್ನು ವೆನೇಟಿ ಬ್ಯಾಗ್ ನಲ್ಲಿ ಇಟ್ಟುಕೊಂಡು ಬಂದಿದ್ದರು.ಮಧ್ಯಾಹ್ನ ಸುಮಾರು 1.45 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಲುಪಿ ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗೆಡೆ ಹೋಗಿ ದೇವರ ದರ್ಶನ ಮುಗಿಸಿ, ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ ಜಿಪ್ ತೆರೆದು ಕೊಂಡಿರುವುದು ಕಂಡು ಬಂದಿತ್ತು. ನೋಡಿದಾಗ ಬ್ಯಾಗ್‌ನಲ್ಲಿ ಇಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ 2 ಪರ್ಸ್ ಗಳು ಹಾಗೂ ನಗದು ರೂ.10 ಸಾವಿರ ನಾಪತ್ತೆಯಾಗಿದ್ದು,ಕೂಡಲೇ ಅವರು ಕಾರು ಪಾರ್ಕ್ ಮಾಡಿದ್ದಲ್ಲಿ ಹೋಗಿ ಕಾರಿನಲ್ಲಿ ಹುಡುಕಾಡಿದಾಗ, ಅಲ್ಲಿಯೂ ಬೆಳ್ಳಿ ಹಾಗೂ ಚಿನ್ನಾಭರಣಗಳು ಇರುವ ಪರ್ಸ್ ಪತ್ತೆಯಾಗಲಿಲ್ಲ. ಜನಸಂದಣಿಯಲ್ಲಿ ಯಾರೋ ಕಳ್ಳರು ಅವರ ಬ್ಯಾಗಿನಲ್ಲಿ ಇಟ್ಟಿದ್ದ ಒಟ್ಟು ರೂ.ಹನ್ನೆರಡು ಸಾವಿರದ ಎಂಬತ್ತು ಸಾವಿರ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ ರೂ ಹತ್ತು ಸಾವಿರ ನಗದನ್ನು ಕಳವು ಮಾಡಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂ. ಹನ್ನೆರಡು ಲಕ್ಷದ ತೊಂಬತ್ತು ಸಾವಿರ ಆಗಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಗಾಯತ್ರಿ ಆರ್ ಜೋಗಿ ದೂರು ನೀಡಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಗೂ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ.ಕುಮಾರ್ ತಂಡದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Next Article