ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಧರ್ಮೋ ರಕ್ಷತಿ ರಕ್ಷಿತಃ ಎಂದ ನಟಿ ರಚಿತಾ ರಾಮ್‌

04:09 PM Jun 18, 2024 IST | Samyukta Karnataka

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಕುರಿತಂತೆ ನಟಿ ರಚಿತಾ ರಾಮ ಮೌನ ಮುರಿದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿಬಂದಿರುವ ಕುರಿತು ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ರಚಿತಾ ರಾಮ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ನಮಸ್ಕಾರ..ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ.ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.. ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Next Article