ಹುಬ್ಬಳ್ಳಿ-ವಿಜಯವಾಡ ನಡುವೆ ರೈಲು ಸಂಚಾರ ತಾತ್ಕಾಲಿಕ ರದ್ದು
10:54 PM May 15, 2024 IST
|
Samyukta Karnataka
ಹುಬ್ಬಳ್ಳಿ: ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡ ಪರಿಣಾಮ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ರೈಲುಗಳ ಸಂಚಾರವನ್ನು ನಾಳೆಯಿಂದ ತಾತ್ಕಾಲಿಕವಾಗಿ ರದ್ದು ಪಡಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.
ರದ್ದಾದ ರೈಲುಗಳು: ರೈಲು ಸಂಖ್ಯೆ ೧೭೩೨೯ ಎಸ್.ಎಸ್.ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮೇ ೧೬ ರಿಂದ ೩೧ ರವರೆಗೆ ರದ್ದುಗೊಳಿಸಲಾಗುತ್ತಿದೆ. ರೈಲು ಸಂಖ್ಯೆ ೧೭೩೩೦ ವಿಜಯವಾಡ - ಎಸ್.ಎಸ್.ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲನ್ನು ಮೇ ೧೭ ರಿಂದ ಜೂನ್ ೧ ರವರೆಗೆ ರದ್ದುಗೊಳಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Article