ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಧ್ವಜಸ್ತಂಭ: ಎರಡು ಗುಂಪುಗಳ ಮಧ್ಯೆ ಘರ್ಷಣೆ..!

10:53 PM Feb 14, 2024 IST | Samyukta Karnataka

ವಾಡಿ: ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಧಾರ್ಮಿಕ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಗುಂಪುಗಳನ್ನು ಚದುರಿಸಿದ ಪ್ರಸಂಗ ನಡೆದಿದೆ.

ವಾಡಿ ಪಟ್ಟಣದಲ್ಲಿ ಫೆ.15 ರಂದು ಶ್ರೀ ಸೇವಾಲಾಲ್ ಜಯಂತಿ ಮೆರವಣಿಗೆ ನಡೆಯುತ್ತಿರುವ ಕಾರಣಕ್ಕೆ ಬಂಜಾರಾ ಸಮುದಾಯದ ಯುವಕರು ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿರುವ ಆಜಾದ್ ಧ್ವಜಸ್ತಂಭಕ್ಕೆ ಸೇವಾಲಾಲ್ ಭಾವುಟ ಲಗತ್ತಿಸಲು ಮುಂದಾದಾಗ ಕೆಲ ಮುಸ್ಲಿಂ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿದ್ದ ಎರಡು ಗುಂಪಿನ ಯುವಕರ ನಡುವೆ ವಾಗ್ವಾದ ಉಂಟಾಗಿದೆ. ಪರಿಸ್ಥಿತಿ ಬಿಗಡಾಯಿಸುವ ಮುನ್ಸೂಚನೆ ಅರಿತ ಪೊಲೀಸರು ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಗುಂಪುಗಳನ್ನು ಚದುರಿಸಿದ್ದಾರೆ. ಸದ್ಯ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ವಿಶೇಷ ಪೊಲೀಸ್ ಪಡೆಯ ವಾಹನ ನಿಲುಗಡೆ ಮಾಡಲಾಗಿದೆ. ಪರಿಸ್ಥಿತಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮದ್ಯ ಮಾರಾಟ ನಿಷೇಧ: ಸೇವಾಲಾಲ್ ಜಯಂತಿ ಮೆರವಣಿಗೆ ಪ್ರಯುಕ್ತ ವಾಡಿ ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಫೆ.15 ರಂದು ಬೆಳಗ್ಗೆ 6 ಯಿಂದ ಸಂಜೆ 11 ಗಂಟೆಯವರೆಗೆ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಫೌಝಿಯಾ ತರನುಮ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ.

14ಎಸ್ ಕೆ-ವಾಡಿ4
ವಾಡಿ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ವಿಶೇಷ ಪೊಲೀಸ್ ಪಡೆಯ ವಾಹನ ನಿಲುಗಡೆ ಮಾಡಲಾಗಿದೆ.

Next Article