For the best experience, open
https://m.samyuktakarnataka.in
on your mobile browser.

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯ ಅಧಿಕಾರಿ ಅಮಾನತು

01:36 PM Aug 27, 2024 IST | Samyukta Karnataka
ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ  ಅರಣ್ಯ ಅಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಅಮಾನತು ಮಾಡಲಾಗಿದೆ.

ಅಮಾನತುಗೊಂಡ ಚಂದನಗೌಡ ದ್ಯಾಮನಗೌಡರ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ನೈನ್ ಮೂಲಕ 250ರೂ. ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ.

ಈ ಚಾರಣದ ಉಸ್ತುವಾರಿಯನ್ನು ಅರಣ್ಯ ಇಲಾಖೆ ನಿರ್ವಹಿಸುತ್ತಿದೆ. ಆನ್ಸೆನ್ ಟಿಕೆಟ್ ಮಾದರಿಯಲ್ಲೇ ಟಿಕೆಟ್ ಮುದ್ರಿಸಿ ಚಾರಣಿಗರಿಗೆ ನೀಡಿ ಅವರಿಂದ ಹಣವನ್ನು ಮೋನಿಕಾ ಎಂಬುವರ ಬ್ಯಾಂಕ್‌ ಖಾತೆಗೆ ಫೋನ್ ಪೇ ಮೂಲಕ ವರ್ಗಾವಣೆ ಮಾಡಿಸಿದ ಆರೋಪ ಚಂದನಗೌಡರ ಮೇಲಿದೆ.

2024ರ ಜೂನ್ ನಲ್ಲಿ ಆನ್ನೈನ್ ಬುಕಿಂಗ್ ಮಾಡಿರುವ ಪಟ್ಟಿಗೂ ಚಾರಣದ ನೋಂದಣಿ ಪುಸ್ತಕದಲ್ಲಿರುವ ಪಟ್ಟಿಗೂ ತಾಳೆಯಾಗಿಲ್ಲ. ಒಂದು ಬುಕಿಂಗ್ ಐಡಿಯನ್ನು ನಕಲು ಮಾಡಿ ಹತ್ತಕ್ಕೂ ಹೆಚ್ಚು ನಕಲಿ ಟಿಕೆಟ್ ಮುದುರಿಸಿರುವುದು ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳು ವರದಿ ಸಲ್ಲಿಸಿದ್ದು, ಇದನ್ನು ಆಧರಿಸಿ ಚಂದನಗೌಡ ಅವರನ್ನು ಅಮಾನತು ಮಾಡಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ ಸಿಂಗ್‌ ಆದೇಶ ಹೊರಡಿಸಿದ್ದಾರೆ.