For the best experience, open
https://m.samyuktakarnataka.in
on your mobile browser.

ನಕಲಿ ಪರಶುರಾಮ ಪ್ರತಿಮೆ ನಿರ್ಮಾಣ: SIT‌ ತನಿಖೆಗೆ ಆಗ್ರಹ

04:02 PM Jul 23, 2024 IST | Samyukta Karnataka
ನಕಲಿ ಪರಶುರಾಮ ಪ್ರತಿಮೆ ನಿರ್ಮಾಣ  sit‌ ತನಿಖೆಗೆ ಆಗ್ರಹ

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಿದರು. ಉಡುಪಿ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣವನ್ನು ವಿಶೇಷ ತನಿಖಾ ದಳ (SIT)‌ ರಚಿಸಿ ತನಿಖೆ ಮಾಡಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈ ವೇಳೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ನಿಯೋಗದಲ್ಲಿ ಇದ್ದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ
ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಕೇಳಿ ಆಶ್ಚರ್ಯ ಉಂಟಾಯಿತು ಎಂದರು.