ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಿ

01:28 PM Nov 21, 2024 IST | Samyukta Karnataka

ಬೆಂಗಳೂರು : ನಕ್ಸಲ್ ವಿಕ್ರಂಗೌಡ ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋದಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ ಎಂದರು. ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಇದು ಸರಿ ಇಲ್ಲ.‌ ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ‌ ಪರಿಗಣಿಸಬೇಕು ಎಂದು ಹೇಳಿದರು.

ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗತಿಯಾದರು. ಅದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು ಎಂದರು.

ಎಕ್ಸಿಟ್ ಪೋಲ್‌ಗಳು ಒಂದೇ ತರನಾಗಿ ಹೇಳಿಲ್ಲ: ಕೆಲವು ಸರ್ವೇಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳನ್ನು ಕೊಟ್ಟಿದ್ದು, ಬಿಜೆಪಿಯವರಿಗೆ 128 ಕೊಟ್ಟಿವೆ. ಇನ್ನು ಕೆಲ ಸರ್ವೇಗಳು ಬಿಜೆಪಿಯವರಿಗೆ 140 ನೀಡಿವೆ. ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದು ಹೇಳಿದರು. ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ‌. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌‌ಗೆ ತೆಗೆದುಕೊಂಡು ಹೋಗಿದ್ದಾರೆ‌. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ‌. ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ ಎಂದು ಹೇಳಿದರು.

Tags :
#ಚುನಾವಣೆ#ಜಿಪರಮೇಶ್ವರ#ನಕ್ಸಲ್‌
Next Article