ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಟಿ ಪದ್ಮಜಾ ರಾವ್‌ಗೆ ಜೈಲು ಶಿಕ್ಷೆ

05:45 PM Aug 27, 2024 IST | Samyukta Karnataka

ಮಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಚಲನಚಿತ್ರ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರು 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿದೆ.
ವೀರೂ ಟಾಕೀಸ್ ಸಂಸ್ಥೆಯ ಮಾಲಕ, ಮಂಗಳೂರು ಮೇರಿಹಿಲ್ ನಿವಾಸಿ ವೀರೇಂದ್ರ ಶೆಟ್ಟಿಯವರಿಂದ ಪದ್ಮಜಾ ರಾವ್ 40 ಲಕ್ಷ ರೂ. ಸಾಲ ಪಡೆದಿದ್ದರೆನ್ನಲಾಗಿದ್ದು, ಇದನ್ನು ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ತನ್ನಿಂದ ಪದ್ಮಜಾ ರಾವ್ 40 ಲಕ್ಷ ರೂ. ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಪದ್ಮಜಾ ರಾವ್ ಚೆಕ್ ನೀಡಿದ್ದರು. ಈ ಚೆಕ್ ಅನ್ನು ನಗದೀಕರಿಸಲು ಹಾಕಿದಾಗ, ಅವರ ಬ್ಯಾಂಕ್ ಖಾತೆಯಲ್ಲಿ ಅಷ್ಟೊಂದು ಮೊತ್ತ ಇರಲಿಲ್ಲ. ಈ ಹಿನ್ನೆಲೆಯಲ್ಲಿ 15 ದಿನಗಳ ಒಳಗೆ ಸಾಲದ ಹಣ ಪಾವತಿಸುವಂತೆ 2020ರ ಜೂನ್ 30ರಂದು ಪದ್ಮಜಾ ರಾವ್‌ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಅವರು ಹಣ ಪಾವತಿಸಿಲ್ಲ ಎಂದು ವಿರೇಂದ್ರ ಶೆಟ್ಟಿ ನ್ಯಾಯಾಲಯಕ್ಕೆ ನೀಡಿರುವ ದೂರಿನಲ್ಲಿ ಹೇಳಿದ್ದರು.
ಸಮನ್ಸ್ ಜಾರಿಯಾದ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಪದ್ಮಜಾ ರಾವ್, ‘ನಾನು ದೂರುದಾರರಿಂದ ಯಾವುದೇ ಸಾಲ ಪಡೆದಿಲ್ಲ ಹಾಗೂ ಅವರಿಗೆ ಯಾವುದೇ ಚೆಕ್ ನೀಡಿಲ್ಲ’ ಎಂದು ಹೇಳಿಕೆ ನೀಡಿದ್ದರು. ಜೊತೆಗೆ ವೀರೇಂದ್ರ ಶೆಟ್ಟಿ ತನ್ನ ಬ್ಯಾಂಕ್ ಚೆಕ್ ಕದ್ದು ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಪದ್ಮಜಾ ರಾವ್ ಆರೋಪಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.
8ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ., ‘ಪದ್ಮಜಾ ರಾವ್ 40.20 ಲಕ್ಷ ರೂ.ದಂಡ ಪಾವತಿಸಬೇಕು. ಅದರಲ್ಲಿ 40.17 ಲಕ್ಷ ರೂ.ವನ್ನು ದೂರುದಾರರಿಗೆ ನೀಡಬೇಕು. ಹಾಗೂ 3 ಸಾವಿರ ರೂ.ವನ್ನು ಸರಕಾರಕ್ಕೆ ಪಾವತಿಸಬೇಕು. 3 ತಿಂಗಳು ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.

Tags :
actorkannada cinimaಪದ್ಮಜಾ ರಾವ್‌
Next Article