ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಟಿ ರಶ್ಮಿಕಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

11:49 PM Feb 18, 2024 IST | Samyukta Karnataka

ಬೆಂಗಳೂರು: ಬಾಲಿವುಡ್ ನಟಿ ರಶ್ಮಿಕಾ ಮಂದಣ್ಣ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶಗೊಂಡಿದೆ. ರಶ್ಮಿಕಾ ಮತ್ತು ಶ್ರದ್ಧಾದಾಸ್ ಒಟ್ಟಿಗೆ ಪ್ರಯಾಣಿಸುತ್ತಿರುವ ವಿಮಾನವು ಮುಂಬೈನಿಂದ ಹೈದರಾಬಾದ್‌ಗೆ ಹೊರಟಿತ್ತು. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಟೇಕ್ ಆಫ್ ಆದ ೩೦ ನಿಮಿಷದ ನಂತರ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಕುರಿತು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಮತ್ತೊಬ್ಬ ನಾಯಕಿ ಶ್ರದ್ಧಾದಾಸ್ ಕೂಡ ಇದ್ದರಂತೆ. ಇಬ್ಬರೂ ವಿಮಾನದಲ್ಲಿ ಒಟ್ಟಿಗೆ ಕುಳಿತಿರುವ ಫೋಟೋವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. `ಇಂದು ನಾವು ಸಾವಿನಿಂದ ಪಾರಾಗಿದ್ದೇವೆ' ಎಂದು ಅವರು ಪೋಸ್ಟ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Next Article