ನಟ ಅಲ್ಲು ಅರ್ಜುನ್ಗೆ ಜಾಮೀನು
06:07 PM Dec 13, 2024 IST | Samyukta Karnataka
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ತುರ್ತು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಅಲ್ಲು ಅರ್ಜುನ್ಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ನಾಂಪಲ್ಲಿ ನ್ಯಾಯಾಲಯ ವಿಧಿಸಿತ್ತು, ಇದೀಗ ಹೈಕೋರ್ಟ್ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿದೆ. ಎಫ್ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು.