ನಟ ದರ್ಶನ್ ಗನ್ ಲೈಸೆನ್ಸ್ ಈಗ ರದ್ದು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ವಿರುದ್ಧ ಪ್ರಕರಣ ನಡೆದ ಬರೋಬ್ಬರಿ ೭ ತಿಂಗಳು ಕಳೆದ ಬಳಿಕ ಪೊಲೀಸರಿಗೆ ಗನ್‌ಲೈಸೆನ್ಸ್ ರದ್ದುಪಡಿಸುವ ಆಲೋಚನೆ ಬಂದಿದೆ ಎನ್ನಲಾಗಿದೆ.
ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಜಾಮೀನು ನೀಡಿರುವ ಪರಿಣಾಮ ನಿರಾಳರಾಗಿರುವ ನಟ ದರ್ಶನ್ ಗನ್ ಹೊಂದಿರುವ ಕುರಿತು ಪೊಲೀಸರು ನೋಟಿಸ್ ನೀಡಿದ್ದಾರೆ. ಗನ್ ಲೈಸೆನ್ಸ್ ರದ್ದುಗೊಳಿಸುವ ಕುರಿತು ಒಂದು ವಾರದಲ್ಲಿ ಸ್ಪಷ್ಟನೆ ನೀಡುವಂತೆ ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ ನೋಟಿಸ್ ಜಾರಿ ಮಾಡಿದ್ದಾರೆ. ಹತ್ಯೆ ಪ್ರಕರಣದ ಆರೋಪಿಯಾಗಿರುವ ನೀವು ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ದರ್ಶನ್‌ಗೆ ಹೈಕೋರ್ಟ್ ಡಿ.೧೭ರಂದು ಪೂರ್ಣಪ್ರಮಾಣದ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಮೂರು ತಿಂಗಳುಗಳ ಕಾಲ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಆದರೆ, ಅವರ ಬಳಿ ಇರುವ ಗನ್ ಕುರಿತು ಪೊಲೀಸರು ಬರೆತಿರಬಹುದು ಎನ್ನಲಾಗಿದೆ.