ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಟ ದರ್ಶನ್, ಪವಿತ್ರಾಗೌಡ ಸೇರಿ 7 ಮಂದಿಗೆ ಜಾಮೀನು

03:46 PM Dec 13, 2024 IST | Samyukta Karnataka

ಬೆಂಗಳೂರು: ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರಿಗೆ ಪೂರ್ಣಾವಧಿ ಜಾಮೀನು ಅನ್ನು ಹೈಕೋರ್ಟ್​ ಮಂಜೂರು ಮಾಡಿದ್ದು. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ರಾವ್‌ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ. 11ರಂದು ನಟ ದರ್ಶನ್‌ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು.

Tags :
#ಜಾಮೀನು#ದರ್ಶನ್#ದರ್ಶನ್&ಗ್ಯಾಂಗ್
Next Article