For the best experience, open
https://m.samyuktakarnataka.in
on your mobile browser.

ನಡು ರಸ್ತೆಯಲ್ಲಿ ನಮಾಜ್: ಖಂಡನೆ

07:54 PM May 27, 2024 IST | Samyukta Karnataka
ನಡು ರಸ್ತೆಯಲ್ಲಿ ನಮಾಜ್  ಖಂಡನೆ

ಮಂಗಳೂರು: ನಡು ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.
ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.