ನನಗೆ ಮದ ಏರಿಲ್ಲ
09:46 PM Dec 25, 2023 IST
|
Samyukta Karnataka
ವಿಜಯಪುರ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಸ್ಪಷ್ಟಪಡಿಸಿದರು.
ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಅವರು ಪ್ರತಿಕ್ರಿಯಿಸಿ ಪರೋಕ್ಷವಾಗಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ನಾನು ರೈತರ ವಿರೋಧಿ ಅಲ್ಲ, ರೈತರ ವಿರೋಧವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಮೂರು ವರ್ಷಕ್ಕೊಮ್ಮೆ ರೈತರ ಬೆಳೆಗಳಿಗೆ ಬೆಲೆ ಬರುತ್ತದೆ. ಉಳಿದ ಎರಡು ಅವಧಿ ಬೆಲೆ ಇಲ್ಲದೆ ಕಂಗಾಲಾಗಿರುತ್ತಾರೆ. ಹಾಗಾಗಿ ರೈತರು ಸಾಲಮನ್ನಾ ಆಗಲಿ ಎಂದು ಆಶಯ ವ್ಯಕ್ತಪಡಿಸುತ್ತಾರೆ ಎಂದಿರುವುದಾಗಿ ಹೇಳಿದರು.
ಇತ್ತೀಚಿಗೆ ಕೇಂದ್ರದ ಯೋಜನೆಗಳು ರೈತರಿಗೆ ಮುಳುವಾಗಿವೆ. ನನಗೆ ಮದ ಏರಿದೆ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ ಇದೆಲ್ಲ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Next Article