ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನನ್ನ ನಿಷ್ಠೆಯನ್ನು ಎದೆ ಬಗೆದು ತೋರಿಸಲು ಸಾಧ್ಯವಿಲ್ಲ

05:42 PM Apr 11, 2024 IST | Samyukta Karnataka

ಚಿಕ್ಕಮಗಳೂರು: ಸಿ.ಟಿ.ರವಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡುವ ಮೂಲಕ ಅನ್ಯಾಯ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮತನಾಡಿದ ಅವರು, ವಿಧಾನಸಭೆಯಲ್ಲಿ ಇರಬೇಕಾದವರು ಈಗ ಹೊರಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲೇಬೇಕು ಎಂದರು. ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಮುಖಂಡ ಸಿ.ಟಿ.ರವಿ ಮಾತನಾಡಿ ಬಿ.ಎಸ್.ಯಡಿಯೂರಪ್ಪ ಅವರ ಹೋರಾಟದಿಂದ ಪ್ರೇರೇಪಿತನಾಗಿ ನಾನು ಬಿಜೆಪಿಗೆ ಬಂದಿದ್ದು, ಆದರೆ ನನ್ನ ಅವರ ಸಂಬಂಧದಲ್ಲಿ ಹುಳಿ ಹಿಂಡುವ ಕೆಲಸ ನಡೆಯಿತು. ನನ್ನ ನಿಷ್ಠೆಯನ್ನು ನಾನು ಎದೆ ಬಗೆದು ತೋರಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ನಾಯಕರ ಹೆಸರನ್ನೇ ಹೇಳಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಅಪಪ್ರಚಾರ ನಡೆಯಿತು. ಇದರಿಂದ ನಾನು ಸೋಲಬೇಕಾಯಿತು ಎಂದು ಹೇಳಿ, ನಾನು ಎಂದೂ ಪಕ್ಷಕ್ಕೆ ದ್ರೋಹ ಮಾಡಲಿಲ್ಲ. ಯಡಿಯೂರಪ್ಪ ಅವರು ಅಧಿಕಾರ ನೀಡಿದಾಗ ರಾಜ್ಯದ ಜನ ಮೆಚ್ಚುವಂತೆ ಕೆಲಸ ಮಾಡಿ ತೋರಿಸಿದ್ದೇನೆ ಎಂದು ಯಡಿಯೂರಪ್ಪರನ್ನು ಹೊಗಳಿದರು. ಮಾದರಸನ ಕೆರೆ, ದಾಸರಹಳ್ಳಿ ಕೆರೆ ತುಂಬಿಸಿದಾಗ ಮತ್ತೆ ಮತ ಕೇಳಲು ಬರುವುದು ಬೇಡ, ನಾವೇ ಮತ ಹಾಕುತ್ತೇವೆ ಎಂದು ಜನ ಹೇಳಿದ್ದರು. ಚುನಾವಣೆ ಸಂದರ್ಭದಲ್ಲಿ ಕೆಲಸದ ಚರ್ಚೆ ಆಗಲಿಲ್ಲ, ಅಪಪ್ರಚಾರ ನಡೆಯಿತು. ನಮ್ಮ ನಾಯಕರ ಹೆಸರನ್ನೂ ಬಳಸಿಕೊಂಡರು. ನಮ್ಮ ಗ್ರಹಚಾರ ಕೆಟ್ಟಿತ್ತು ಎನ್ನಿಸುತ್ತೆ, ಆಗ ಜೆಡಿಎಸ್‌ನವರೂ ಅವರಿಗೇ ಬೆಂಬಲ ನೀಡಿದರು ಎಂದು ಬೇಸರ ವ್ಯಕ್ತಪಡಿಸಿದರು.

Next Article