For the best experience, open
https://m.samyuktakarnataka.in
on your mobile browser.

ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬೂತ್ ಮಟ್ಟದಿಂದ ಕ್ರಿಯಾಶೀಲ ಕಾರ್ಯಕ್ರಮ

12:57 PM Dec 07, 2023 IST | Samyukta Karnataka
ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬೂತ್ ಮಟ್ಟದಿಂದ ಕ್ರಿಯಾಶೀಲ ಕಾರ್ಯಕ್ರಮ

ಬೆಳಗಾವಿ: ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬೂತ್ ಮಟ್ಟದಿಂದಲೂ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆನೀಡಿದ್ದಾರೆ.
ಅವರು ಬೆಳಗಾವಿ ಹಾಗೂ ಧಾರವಾಡ ವಿಭಾಗದ ನಗರಸಭೆ ಸದಸ್ಯರ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿ ಸಂಘಟನಾತ್ಮಕವಾಗಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬೂತ್ ಮಟ್ಟದಿಂದಲೂ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕರೆನೀಡಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ್ ನೇರಳೆ, ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ನವೀನ್ ಕೊಟ್ಟಿಗೆ, ರಾಜ್ಯ ವಕ್ತಾರ ಎಂ.ಬಿ‌.ಜಿರಲಿ, ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಡಾ. ರವಿಪಾಟೀಲ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ನಗರಸಭಾ ಸದಸ್ಯರು ಭಾಗವಹಿಸಿದ್ದರು.