ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಗರಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಸರ್ಕಾರ

12:12 PM Jan 12, 2024 IST | Samyukta Karnataka

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಾಗರಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹಾವೇರಿ ಪ್ರಕರಣ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯದ ವರದಿ ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು ರಾಜ್ಯದಲ್ಲಿ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯನ್ನು ತೋರುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಾಗರಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಕ್ರಿಮಿನಲ್‌ಗಳಿಗೆ ಪೋಲೀಸರ ಭಯವಿಲ್ಲದೆ ಅಪರಾಧ ಕೃತ್ಯ ಹೆಚ್ಚಾಗುತ್ತಿದೆ. ಈ ಕೂಡಲೇ ಆ 7 ಮಂದಿ ದುರುಳರನ್ನು ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದಿದ್ದಾರೆ.

Next Article