ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಚಾರಣೆಗೆ ಹಾಜರಾಗುವಂತೆ ED ಸಮನ್ಸ್… ಡಿ.ಕೆ. ಶಿವಕುಮಾರ್ ಅವರು ಅಸಮಧಾನ

04:54 PM Sep 15, 2022 IST | Samyukta Karnataka

ಬೆಂಗಳೂರು: ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಡಿಕೆಶಿ ‘ಭಾರತ್ ಜೋಡೋ ಯಾತ್ರೆ ಹಾಗೂ ಅಧಿವೇಶನ ನಡೆಯುತ್ತಿದೆ, ಈ ಸಂದರ್ಭದಲ್ಲಿ ನನಗೆ ಮತ್ತೊಮ್ಮೆ ED ಸಮನ್ಸ್‌ ಕೊಟ್ಟಿದೆ. ನಾನು ಇಡಿ ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ, ಆದರೆ ಮೇಲಿಂದ ಮೇಲೆ ನನಗೆ ಕಿರುಕುಳ ನೀಡಲಾಗುತ್ತಿದೆ. ಇದರಿಂದ ನನ್ನ ರಾಜಕೀಯ ಕರ್ತವ್ಯ ನಿರ್ವಹಿಸಲು ತೊಂದರೆಯಾಗ್ತಿದೆ’ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

Next Article