For the best experience, open
https://m.samyuktakarnataka.in
on your mobile browser.

ಹೊಸ ವಂಟಮೂರಿ ಪ್ರಕರಣ: ತನಿಖೆ ಸಿಐಡಿಗೆ ಹಸ್ತಾಂತರ

07:04 PM Dec 17, 2023 IST | Samyukta Karnataka
ಹೊಸ ವಂಟಮೂರಿ ಪ್ರಕರಣ  ತನಿಖೆ ಸಿಐಡಿಗೆ ಹಸ್ತಾಂತರ

ಬೆಳಗಾವಿ: ಜಿಲ್ಲೆಯ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತçಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ಭಾನುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಕೇಸ್‌ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು.
ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದ್ದು, ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿAದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಾಳೆ ಬೆಳಗಾವಿಗೆ ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದು, ಈ ಹಿನ್ನೆಲೆ ಜಿಲ್ಲೆಯ ಸರ್ಕೂ್ಯಟ್ ಹೌಸ್‌ನಲ್ಲೇ ಪೊಲೀಸರಿಂದ ಮಾಹಿತಿ ಪಡೆಯಲಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ. ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರಕರಣ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೋಗಲು ವಿಳಂಬ ಮಾಡಿದ್ದ ಕಾಕತಿ ಸಿಪಿಐ ವಿಜಯ್ ಸಿನ್ನೂರ್‌ರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.