For the best experience, open
https://m.samyuktakarnataka.in
on your mobile browser.

ನಮ್ಮ ಮೆಟ್ರೋ: ಹೆಚ್ಚುವರಿ ರೈಲು ಸಂಚಾರ ಮಾರ್ಗದ ಮಾಹಿತಿ

07:42 PM Jul 05, 2024 IST | Samyukta Karnataka
ನಮ್ಮ ಮೆಟ್ರೋ  ಹೆಚ್ಚುವರಿ ರೈಲು ಸಂಚಾರ ಮಾರ್ಗದ ಮಾಹಿತಿ

ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗ ರೈಲುಗಳ ಸಂಚಾರ ಸಮಯವನ್ನು ಬದಲಾವಣೆ ಮಾಡಿದ್ದು ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಪರಿಷ್ಕೃತ ರೈಲು ಸಂಚಾರ ಸೇವೆಯು ನಾಳೆಯಿಂದಲೆ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪುಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.
ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39, 10.50, 11.00, 11.22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಿಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ.
ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್‌ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪುಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20 ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.