For the best experience, open
https://m.samyuktakarnataka.in
on your mobile browser.

ನಾಗಮಂಗಲ ಪ್ರಕರಣ ರಾಜಕೀಯ ಮಾಡಬೇಡಿ

11:29 AM Sep 12, 2024 IST | Samyukta Karnataka
ನಾಗಮಂಗಲ ಪ್ರಕರಣ ರಾಜಕೀಯ ಮಾಡಬೇಡಿ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಈ ಘಟನೆಗೆ ಸಂಬಂಧಿಸಿದಂತೆ 52 ಜನರನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಅದು ಕೋಮು ಗಲಭೆ ಅಲ್ಲ, ಆಕಸ್ಮಿಕವಾಗಿ ನಡೆದಿರುವ ಘಟನೆ. ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ, ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರು ಎಲ್ಲ ಭದ್ರತೆ ಮಾಡಿಕೊಂಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ತುಕಡಿಯನ್ನೂ ನಿಯೋಜಿಸಿಲಾಗಿತ್ತು. ಇಲ್ಲದೇ ಇದ್ದರೆ ಇನ್ನೂ ಹೆಚ್ಚಿನ ಗಲಾಟೆ ಆಗುತ್ತಿತ್ತು, ಗಲಾಟೆ ವೇಳೆ ಬೈಕ್​ಗಳು, ಅಂಗಡಿಗೆ ಬೆಂಕಿ ಹಾಕಿದ್ದಾರೆ. ಗಣೇಶ ವಿಸರ್ಜನೆ ವೇಳೆ ಯಾರೋ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಸದ್ಯ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ, ‘ಸಿಸಿಟಿವಿ ಕ್ಯಾಮೆರಾ ವಿಡಿಯೊಗಳನ್ನು ಗಮನಿಸಿ ಕೆಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಾಗಮಂಗಲ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್​ಐಗೂ ಗಾಯವಾಗಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಡಿಸಿ ಡಾ. ಕುಮಾರ್, ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಜೊತೆ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಾಗಮಂಗಲಕ್ಕೆ ಬಿಜೆಪಿ ನಿಯೋಗ ಬೇಟಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವರು, ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ನಾನು ಮನವಿ ಮಾಡ್ತೇನೆ. ಪೊಲೀಸರು ಇದ್ದಾರೆ ಅವರಿಗೆ ವಿಚಾರಣೆ ಮಾಡಲು ಬಿಡಿ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಇದ್ದರೆ ಕೊಡಲಿ. ಅದನ್ನು ಬಿಟ್ಟು ರಾಜಕೀಯ ಮಾಡಬಾರದು. ಈಗಾಗಲೇ ಎಡಿಜಿಪಿ ಹೋಗಿದ್ದಾರೆ. ಅವಶ್ಯ ಬಿದ್ದರೆ ನಾನು ಹೋಗುತ್ತೇನೆ ಎಂದರು,

Tags :